alex Certify ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ: ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ: ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ದಂಪತಿ ತೆರಳುತ್ತಿದ್ದ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಪತ್ನಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದ ಅಭಯ ವೃತ್ತದಲ್ಲಿ ಅಪಘಾತ ಸಂಭವಿಸಿದೆ.

56 ವರ್ಷದ ಮಲ್ಲಿಕಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಟಿವಿಎಸ್ ಪ್ಯಾಲೇಸ್ ನಲ್ಲಿ ಸಂಬಂಧಿಕರ ಮದುವೆಗೆ ಬಂದಿದ್ದರು. ನಾಗವಾರದಿಂದ ಬೈಕ್ ನಲ್ಲಿ ಮುನಿರಾಜು ಮತ್ತು ಮಲ್ಲಿಕಾ ಬಂದಿದ್ದಾರೆ. ಈ ವೇಳೆ ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದ ಮಲ್ಲಿಕಾ ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ವೈದೇಹಿ ಆಸ್ಪತ್ರೆಗೆ ಮಲ್ಲಿಕಾ ಶವ ಸ್ಥಳಾಂತರಿಸಲಾಗಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...