HomeKarnatakaBIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ 10 ದಿನಗಳ ಕಾಲ ಉಭಯ ಸದನಗಳ ಕಲಾಪ ನಡೆಸಲಾಗುವುದು. ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಬೆಳಗಾವಿ ಜಿಲ್ಲಾಡಳಿತ ಇದ್ದೆ ಈಗಾಗಲೇ ಸೂಚನೆ ನೀಡಲಾಗಿದೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular