HomeKarnatakaಪಡಿತರ ಪಡೆಯದವರು, ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್: 13.87 ಲಕ್ಷ ಕಾರ್ಡ್ ರದ್ದು

ಪಡಿತರ ಪಡೆಯದವರು, ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್: 13.87 ಲಕ್ಷ ಕಾರ್ಡ್ ರದ್ದು

ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ 13,87,639 ಬಿಪಿಎಲ್ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕು ನೀಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮಕ್ಕೆ ವಿರುದ್ಧವಾಗಿ ಒಟ್ಟು 4036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದನ್ನು ಪತ್ತೆ ಮಾಡಲಾಗಿದೆ. 2964 ಕುಟುಂಬಗಳ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ರೇಷನ್ ಪಡೆಯದ 2.75 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳು, ಆದಾಯ ತೆರಿಗೆ ಪಾವತಿಸುವ 98458 ಕುಟುಂಬಗಳು, ಆದಾಯ ಮಿತಿ ಜಾಸ್ತಿ ಇರುವ 10,09,479 ಕುಟುಂಬಗಳು ಸೇರಿ ಒಟ್ಟು 13.87 ಲಕ್ಷ ಕಾರ್ಡುಗಳನ್ನು ಅನರ್ಹ ಕಾರ್ಡುಗಳು ಎಂದು ಗುರುತಿಸಲಾಗಿದೆ. ಇವುಗಳಲ್ಲಿ 3.63 ಲಕ್ಷಕ್ಕೂ ಹೆಚ್ಚು ಕಾರ್ಡುಗಳನ್ನು ರದ್ದು ಮಾಡಲಾಗಿದೆ. 10.38 ಲಕ್ಷಕ್ಕೂ ಅಧಿಕ ಕಾರ್ಡುಗಳ ರದ್ದುಪಡಿಸುವ ಪ್ರಕ್ರಿಯೆ ನಡೆದಿದೆ. ಈ ಕ್ರಮದಿಂದಾಗಿ 18.70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ನಿಂದ ಹೊರಗೆ ಹೋಗಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular