ಹಾವೇರಿ : ಹಾವೇರಿಯಲ್ಲಿ ಘೋರ ಘಟನೆ ನಡೆದಿದ್ದು, ಹೃದಯಾಘಾತದಿಂದ ತಂದೆ-ಮಗ ಸಾವನ್ನಪ್ಪಿದ ಘಟನೆ ನಡೆದಿದೆ.
ಮಗ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯಾವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ.
ಡಾ. ವೀರಭದ್ರಪ್ಪ ಗುಂಡಗಾವಿ (68) ಮೃತ ತಂದೆ. ಡಾ. ವಿನಯ್ ಗುಂಡಗಾವಿ (38) ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಗ. ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ತಂದೆ ಡಾ.ವೀರಭದ್ರಪ್ಪ ಗುಂಡಗಾವಿಗೆ ಹಾವೇರಿಯಲ್ಲಿ ಹೃದಯಾಘಾತವಾಗಿದೆ. ಹೃದಯಾಘಾತದಿಂದ ತಂದೆಯೂ ಕೊನೆಯುಸಿರೆಳೆದಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕ ಮನೆ ಮಾಡಿದೆ.