ಬೆಂಗಳೂರು : ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ʼರಕ್ಷಾ ಕೋಟೆʼ ಆರಂಭಿಸಿದೆ.
ರಾಜ್ಯದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ʼರಕ್ಷಾ ಕೋಟೆʼ ನಿರ್ಮಿಸಲಾಗಿದ್ದು, ಮಾಜಿ ಸೇನಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.