HomeIndiaBREAKING NEWS: ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯ

BREAKING NEWS: ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯ

ಮುಂಬೈ: ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಬಿಗ್ ಕ್ಯಾಶ್ ಪೋಕರ್ ಮಾಲೀಕ ಅಂಕುರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವಂತೆ ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಪೊಲೀಸ್ ಕಮಿಷನರ್ ಮತ್ತು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.

ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ನ ಜಾಹೀರಾತಿನಲ್ಲಿ ಸಿದ್ದಿಕಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಹಾರಾಷ್ಟ್ರ ಪೊಲೀಸರ ಇಮೇಜ್‌ಗೆ ಕಳಂಕ ತರುತ್ತದೆ ಎಂದು ಆರೋಪಿಸಲಾಗಿದೆ.

ಹಿಂದೂ ಜನಜಾಗೃತಿ ಸಮಿತಿಯ ಸಾಮಾಜಿಕ ಕಲ್ಯಾಣ ಅಭಿಯಾನವಾದ ಸುರಾಜ್ಯ ಅಭಿಯಾನವು “ಪೊಲೀಸರ ಮಾನಹಾನಿ”ಗಾಗಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಮಹಾರಾಷ್ಟ್ರ ಪೊಲೀಸ್ ಸಮವಸ್ತ್ರ ಧರಿಸಿರುವ ಸಿದ್ದಿಕಿ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್ ‘ಬಿಗ್ ಕ್ಯಾಶ್ ಪೋಕರ್’ ಜಾಹೀರಾತಿನಲ್ಲಿ ಪೋಕರ್ ಆಡಲು ಜನರಿಗೆ ಕರೆ ನೀಡುತ್ತಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular