alex Certify ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಉಪಚುನಾವಣೆ: ಅಧಿಕಾರಿಗಳು, ಸಿಬ್ಬಂದಿಗೆ ರಜೆ ನಿರ್ಬಂಧ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ.

ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿರುವುದರಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...