ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮೃತರ ಸಂಖ್ಯೆ 4 ಕ್ಕೇರಿಯಾಗಿದೆ. ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು.
ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. ದುರಂತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಉಳಿದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.