ಹಾಸನದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ವಾಸಿಸುತ್ತಿದ್ದ ಮೂವರು ಬಾಂಗ್ಲಾ ವಲಸಿಗರು ಅರೆಸ್ಟ್

ಹಾಸನ: ನಕಲಿ ಆಧಾರ್ ಕಾರ್ಡ್ ನೊಂದಿಗೆ ಹಾಸನ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ಮಂಗಳವಾರ ಬಂದಿಸಿದ್ದಾರೆ.

ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ ಬಂಧಿತರು. ಕಟ್ಟಡ ನಿರ್ಮಾಣ ಕಾರ್ಮಿಕರಾಗಿರುವ ಮೂವರು ಹಾಸನದ 80 ಅಡಿ ರಸ್ತೆಯ ಗದ್ದೆಹಳ್ಳದಲ್ಲಿ ಜುಬೇರ್ ಎಂಬುವರ ಮನೆಯಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳದ ವಿಳಾಸದಲ್ಲಿ ಇವರು ನಕಲಿ ಆಧಾರ್ ಕಾರ್ಡ್ ಪಡೆದು ಬೆಂಗಳೂರಿನ ಮೂಲಕ ಹಾಸನಕ್ಕೆ ಬಂದ್ದರು.

ತಮ್ಮನ್ನು ಪಶ್ಚಿಮ ಬಂಗಾಳದವರು ಎಂದೇ ಹೇಳಿಕೊಂಡಿದ್ದ ಇವರು ಹಾಸನದಲ್ಲಿ ಕಾರ್ಮಿಕರಾಗಿ ಕಲೆಸ ಮಾಡಿಕೊಂಡಿದ್ದರು. ಮೂವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read