ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಪ್ರತ್ಯಕ್ಷರಾಗಿದ್ದು, ಸೈನಿಕನ ನಡೆ ಬಹಳ ಕುತೂಹಲ ಮೂಡಿಸಿದೆ.
ಹೌದು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಸಿ.ಪಿ ಯೋಗೇಶ್ವರ್ ಕಾಣಸಿಕೊಂಡಿದ್ದಾರೆ. ಈ ಮೂಲಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಫಿಕ್ಸ್ ಆದಂತಿದೆ.
ಒಂದೇ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಯೋಗೇಶ್ವರ್ ತೆರಳಿದ್ದು, ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡೆ ಬಹಳ ಕುತೂಹಲ ಮೂಡಿಸಿದೆ. ಈ ಮೂಲಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಯೋಗೇಶ್ವರ್ ಮಾತುಕತೆ ನಡೆಸಿ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡಲಿದ್ದಾರೆ.