HomeKarnatakaBJP-JDS ನಾಯಕರಿಗೆ ಸೆಡ್ಡು ಹೊಡೆದ 'ಸೈನಿಕ': ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

BJP-JDS ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ರಾಜಕೀಯ ಚದುರಂಗದಾಟವಾಗಿ ಮಾರ್ಪಟ್ಟಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಮುಹೂರ್ತ ಫಿಕ್ಸ್ ಆಗಿದೆ.

ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಯೋಗೇಶ್ವರ್, ಬಳಿಕ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.
ಸಿಎಂ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಸಭೆ ಬಳಿಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ನಿರ್ಧಾರ ಹೊರಬಿದ್ದಿದೆ.

ಇಂದು ಬೆಳಿಗ್ಗೆ 11:30ಕ್ಕೆ ಸಿ.ಪಿ.ಯೋಗೇಶ್ವರ್, ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಯೋಗೇಶ್ವರ್ ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ. ಇಂದು ಸಂಜೆ ವೇಳೆಗೆ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರ ಹೆಸರು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

For Latest News Updates, Join Our Whatsapp Community🚩
RELATED ARTICLES

Most Popular