alex Certify ಅ. 26 ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಾಮುತ್ತ ‘ನಿಷೇಧಾಜ್ಞೆ’ ಜಾರಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 26 ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಾಮುತ್ತ ‘ನಿಷೇಧಾಜ್ಞೆ’ ಜಾರಿ.!

ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್, 26 ರಂದು ನಡೆಯುವ ಕಂದಾಯ ಇಲಾಖೆಯ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ(ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರವಾದ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಸೇರಿದಂತೆ ಈ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...