alex Certify ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ನ. 30ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸ್ಥಗಿತ

ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...