HomeIndiaಹಬ್ಬದ ಹೊತ್ತಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ 'ಭಾರತ್' ಅಕ್ಕಿ,...

ಹಬ್ಬದ ಹೊತ್ತಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ‘ಭಾರತ್’ ಅಕ್ಕಿ, ಬೇಳೆ -ಕಾಳು ಮಾರಾಟಕ್ಕೆ ಚಾಲನೆ

ನವದೆಹಲಿ: ದೀಪಾವಳಿ ಸಮೀಪಿಸುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ.

ದೀಪಾವಳಿ ಹಬ್ಬದ ವೇಳೆಗೆ ಆಹಾರ ಧಾನ್ಯಗಳ ಬೆಲೆ ನಿಯಂತ್ರಣದ ಉದ್ದೇಶದಿಂದ ಭಾರತ್ ಅಕ್ಕಿ, ಬೇಳೆ ಕಾಳುಗಳನ್ನು ಕಡಿಮೆ ದರದಲ್ಲಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ಕಡಿಮೆ ಮಾಡಲು ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬುಧವಾರ ದೆಹಲಿಯ ಕೃಷಿ ಭವನದಲ್ಲಿ ಕಡಿಮೆ ದರದಲ್ಲಿ ಆಹಾರ ಧಾನ್ಯ ಮಾರಾಟ ಮಾಡುವ ವಾಹನಗಳಿಗೆ ಅವರು ಚಾಲನೆ ನೀಡಿ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯ ಎನ್ಸಿಆರ್ ನಿವಾಸಿಗಳಿಗೆ ಕಡಲೆ ಬೇಳೆ ಕೆಜಿಗೆ 70 ರೂ., ಹೆಸರುಬೇಳೆ 107 ರೂ., ತೊಗರಿ ಬೇಳೆ 89 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಈ ಯೋಜನೆ ಕೈಗೊಂಡಿದ್ದು, ನಾಗರೀಕರ ಮೇಲೆ ಹೆಚ್ಚುತ್ತಿರುವ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಭಾರತ್ ಅಕ್ಕಿ, ಬೇಳೆ ಕಾಳುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇಂದು ಭಾರತ್ ದಾಲ್(ಬೇಳೆಗಳು) ಮಾರಾಟ ಮಾಡುವ ವ್ಯಾನ್‌ಗಳಿಗೆ ಚಾಲನೆ ನೀಡಲಾಗಿದೆ. ಕಳೆದ ವರ್ಷ ಎಲ್ ನೀನೋದ ಕಾರಣ, ಬೇಳೆಗಳ ಉತ್ಪಾದನೆಯು ಕಡಿಮೆಯಾಗಿದ್ದು, ನಾವು PSF(ಬೆಲೆ ಸ್ಥಿರೀಕರಣ ನಿಧಿಗಳ) ಮೂಲಕ ಆಮದು ಮಾಡಿಕೊಂಡು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಹಳ ರಾಜ್ಯಗಳು ತಮಗೆ ಹಂಚಿಕೆಯಾಗುತ್ತಿರುವ ಗೋಧಿಯ ಪ್ರಮಾಣವನ್ನು ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದವು. ಅದರಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಗೋಧಿಯ ಹಂಚಿಕೆಯನ್ನು ಹೆಚ್ಚಿಸಿ, ಭಾರತ್ ಆಟ್ಟಾವನ್ನು ಕೂಡ ಶುರು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular