HomeKarnatakaBREAKING: ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

BREAKING: ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರು ಹೊರವಲಯದ ಬೆಟ್ಟದಾಸನಪುರದಲ್ಲಿ ಸಿಲಿಂಡರ್ ಸ್ಫೋಟಿಸಿ ಇಬ್ಬರು ಗಾಯಗೊಂಡಿದ್ದಾರೆ.

ಗ್ಯಾಸ್ ಸಿಲಿಂಡರ್ ರಿಫಿಲ್ಲಿಂಗ್ ವೇಳೆ ಸ್ಪೋಟಗೊಂಡು ಅವಘಡ ಸಂಭವಿಸಿದೆ. ತಬ್ರೇಜ್ ಎಂಬಾತ ಗ್ಯಾಸ್ ರೀಫಿಲ್ಲಿಂಗ್ ನಡೆಸುತ್ತಿದ್ದ. ಅಂಗಡಿ ಶಟರ್ ಕ್ಲೋಸ್ ಮಾಡಿ ರೀಫಿಲ್ಲಿಂಗ್ ನಡೆಸುವಾಗಲೇ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಅಂಗಡಿಯ ಶಟರ್ ಕಿತ್ತು ಹೋಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular