ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, 25 ಕೋಟಿ ರೂ. ಇತಿಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ, ಸಿಬ್ಬಂದಿ, ಹೆಚ್ಚಿನ ಕಾಳಜಿ ಮತ್ತು ಪರಿಶ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನಿರ್ಮಿಸಬೇಕು. ವ್ಯಾಪಕ ಪ್ರಚಾರ, ಉತ್ತಮ ಅಲಂಕಾರ, ಮೆರವಣಿಗೆ, ವಿಚಾರಗೋಷ್ಠಿ, ಕಾರ್ಯಕ್ರಮ, ಸ್ಥಳೀಯ ಆಹಾರ, ಉತ್ತರ ಕರ್ನಾಟಕ ತಿನಿಸುಗಳ ಸಮ್ಮಿಶ್ರ ಊಟೋಪಚಾರ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.