HomeKarnatakaBREAKING NEWS: NDA ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ

BREAKING NEWS: NDA ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಈ ನಡುವೆ ನಿಖಿಲ್ ತಾನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಪ್ಪಿದ್ದೇನೆ ಎಂದು ಘೋಷಿಸಿದ್ದಾರೆ.

ಬೆಂಗಳೂರಿನ ಶೆಷಾದ್ರಿಪುರಂ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಿಮ್ಮೆಲ್ಲರ ಒತ್ತಡಕ್ಕೆ ಮಣಿದು ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಾಗಿದ್ದೇನೆ. ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಒಪ್ಪಿದ್ದೇನೆ ಎಂದು ತಿಳಿಸಿದ್ದಾರೆ.

ಈ ಮೂಲಕ ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು, ಮಧ್ಯಾಹ್ನ 3:30ಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular