ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಹಿನ್ನೆಯಲ್ಲಿ ಎನ್ ಡಿಎ ಅಭ್ಯರ್ಥಿ ಹೆಸರು ಕೊನೆಗೂ ಪ್ರಕಟವಾಗಿದ್ದು, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮರಸ್ವಾಮಿಯನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದರು.
ನಿಖಿಲ್ ಕುಮಾರಸ್ವಾಮಿಗೆ ಪ್ರಧಾನಿ ಮೋದಿ, ದೇವೇಗೌಡರು ಎಲ್ಲರ ಆಶಿರ್ವಾದವಿದೆ. ಉಪಚುನಾವಣೆಯಲ್ಲಿ ನಿಖಿಲ್ ಗೆಲುವು ಖಚಿತ ಎಂಬ ವಿಶ್ವಾಸವಿದೆ. ಗೆದ್ದುಬಂದು ಮತ್ತೆ ಮಾತನಾಡುತ್ತೇನೆ. ನಿಖಿಲ್ ನೂರಕ್ಕೆ ನೂರರಷ್ಟು ಚುನಾವಣೆಯಲ್ಲಿ ಗುಲುವು ಸಾಧಿಸುತ್ತಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.