ಬೆಂಗಳೂರು: ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರು ಪ್ರಕರಣಗಳಲ್ಲಿಯೂ ಶಾಸಕ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ಕೋರ್ಟ್ ನಿಂದ ಹೊರ ಬರುತ್ತಿದ್ದಂತೆ ಎಲ್ಲಾ ಅಪರಾಧಿಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಆರು ಪ್ರಕರಣಗಳ ಎಲ್ಲಾ ಅಪರಾಧಿಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಜೈಲಿಗೆ ಸಿಬಿಐ ಸ್ಥಳಾಂತರ ಮಾಡಿದೆ. ನಾಳೆ ಮಧ್ಯಾಹ್ನ 12:30ಕ್ಕೆ ಮತ್ತೆ ಅವರನ್ನು ನ್ಯಾಯಾಲಯಕ್ಕೆ ಸಿಬಿಐ ಹಾಜರುಪಡಿಸಲಿದೆ. ನಾಳೆ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
ಸಿಸಿಹೆಚ್ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಮಹೇಶ್, ನಾಗರಾಜ್, ಗೋವಿಂದರಾಜ್, ಸತೀಶ್ ಸೈಲ್ ಅವರನ್ನು ದೋಷಿ ಎಂದು ಘೋಷಿಸಿದ್ದು, ಕೋರ್ಟ್ ನಿಂದ ಹೊರಗೆ ಬರುತ್ತಿದ್ದಂತೆ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.