ಬೆಂಗಳೂರು : ನನಗೆ 30 ವರ್ಷದ ಹಿಂದೆಯೇ ಸಕ್ಕರೆ ಖಾಯಿಲೆ ಬಂದಿದೆ. 24 ವರ್ಷದ ಹಿಂದೆಯೇ ಸ್ಟಂಟ್ ಅಳವಡಿಕೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನನಗೆ 30 ವರ್ಷದ ಹಿಂದೆಯೇ ಸಕ್ಕರೆ ಖಾಯಿಲೆ ಬಂದಿದೆ. 24 ವರ್ಷದ ಹಿಂದೆಯೇ ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಆದರೂ ಇಂದಿಗೂ ಪಕ್ಷದ ಕಾರ್ಯ, ಸರ್ಕಾರದ ಕಾರ್ಯ ಮಾಡುತ್ತಾ, ಚುನಾವಣಾ ಪ್ರಚಾರ ಮಾಡುತ್ತಾ ಆರಾಮವಾಗಿ ಓಡಾಡಿಕೊಂಡು ಇದ್ದೀನಿ. ಇದಕ್ಕೆ ಕಾರಣ ವೈದ್ಯರ ಸಲಹೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಗೃಹ ಆರೋಗ್ಯ ಯೋಜನೆಯ ಮೂಲಕ ನಿಮ್ಮ ಮನೆ ಬಾಗಿಲಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆ ಬರುತ್ತಿದೆ. ರಕ್ತದೊತ್ತಡ, ಸಕ್ಕರೆ ಖಾಯಿಲೆ ಹಾಗೂ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ರೆಯಲ್ಲಿ ಉಸಿರುಕಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ ಸೇರಿದಂತೆ ಬಹುಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಮನೆಯಲ್ಲೇ ಪತ್ತೆಮಾಡಿ, ಪರಿಸ್ಥಿತಿ ಕೈಮೀರದಂತೆ ನಿಯಂತ್ರಿಸುವುದು ಈ ಯೋಜನೆಯ ಉದ್ದೇಶ. ನೀವಿನ್ನು ನಿಶ್ಚಿಂತರಾಗಿರಿ, ನಿಮ್ಮ ಆರೋಗ್ಯದ ಕಾಳಜಿಯನ್ನು ನಾವು ವಹಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.