ಬೆಂಗಳೂರು : ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಪೋಷಕರ ವಾರ್ಷಿಕ ಆದಾಯ ಮಿತಿ ರೂ.೨.೫೦ ಲಕ್ಷದೊಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP portal) ಮೂಲಕ ಆನ್ಲೈನ್ ನಲ್ಲಿ ಇಲಾಖಾ ವೆಬ್ಸೈಟ್ ವಿಳಾಸ: www.sw.kar.nic.in & https://ssp.postmatric.karnataka.gov.in/homepage.aspx ನಲ್ಲಿ ಅರ್ಜಿಯನ್ನು ಸಲ್ಲಿಸಿ ಎಸ್ಎಸ್ ಪಿ ಐಡಿ ಯೊಂದಿಗೆ ಸಮಾಜ ಕಲ್ಯಾಣ ಇಲಾಖಾ ಕಛೇರಿ/ಕರ್ನಾಟಕ ಒನ್/ಗ್ರಾಮ ಒನ್/ ಶಿವಮೊಗ್ಗ ಒನ್ ಹಾಗೂ ಇತರೆ ನಾಗರೀಕ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಕ್ ಇ-ದೃಢೀಕರಣ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ವಿದ್ಯಾರ್ಥಿಗಳು ನಾಗರೀಕ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಇ-ದೃಢೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯಾವುದೇ ಹಣ ಪಾವತಿಸುವಂತಿಲ್ಲ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ತಪ್ಪಿದಲ್ಲಿ ವಿದ್ಯಾರ್ಥಿ ವೇತನ ಮಂಜೂರಾಗುವುದಿಲ್ಲ. ಎಂದು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ತಾಲ್ಲೂಕು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.