ಗಮನಿಸಿ: ಅ.27 ರಂದು ಬಳ್ಳಾರಿಯ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಅ.27 ರಂದು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಸಂಬಂಧಿಸಿದ 11ಕೆ.ವಿ ಮಾರ್ಗಗಳಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ತಿಳಿಸಿದ್ದಾರೆ.

ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು:

ಎಫ್-1 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹುಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಮಿಂಚೇರಿ ಐ.ಪಿ ಮಾರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್‌ಜೆ ಕೋಟೆ ಕೃಷಿ ಪ್ರದೇಶಗಳು.

ಎಫ್-4, ಸುಧಾಕರ ಪೈಪ್ ಮಾರ್ಗದ 2ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ. ಎಫ್-5 ಅಪೇರಲ್ ಪಾರ್ಕ್ ಮಾರ್ಗದ 3ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ.

ಎಫ್-6 ಗುರುನಾಥ ರೈಸ್‌ಮಿಲ್ ಮಾರ್ಗದ 4ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read