HomeKarnatakaBREAKING: ಗೂಡ್ಸ್ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ದುರ್ಮರಣ

BREAKING: ಗೂಡ್ಸ್ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ದುರ್ಮರಣ

ಶಿವಮೊಗ್ಗ: ಗೂಡ್ಸ್ ವಾಹನ ಹಾಗೂ ಟಿವಿಎಸ್ ಎಕ್ಸ್ ಎಲ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ನಡೆದಿದೆ.

ಬೆಳಂದೂರು ಗ್ರಾಮದ ವಾಸಪ್ಪ(60), ಅವರ ಅಳಿಯ ಸತೀಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ತ್ಯಾಗರ್ತಿ ಕಡೆಗೆ ತೆರಳುತ್ತಿತ್ತು. ಟಿವಿಎಸ್ ಎಕ್ಸೆಲ್ ನಲ್ಲಿ ಇಬ್ಬರು ಆನಂದಪುರ ಕಡೆಗೆ ಹೋಗುವಾಗ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular