HomeAgricultureರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿ: ಇದೇ ಮೊದಲ...

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿ: ಇದೇ ಮೊದಲ ಬಾರಿಗೆ 8 ಕೃಷಿ ಉತ್ಪನ್ನಗಳಿಗೆ MSP ಅಡಿ ಖರೀದಿಗೆ ಅನುಮತಿ

ಬೆಂಗಳೂರು: ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿ ನಂತರ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಇದರೊಂದಿಗೆ ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಒಪ್ಪಿಗೆ ಸಿಕ್ಕಿದೆ ಸಿಕ್ಕಿರುವುದು ಇದೇ ಮೊದಲ ಬಾರಿಯಾಗಿದೆ.

ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೂರ್ಯಕಾಂತಿ, ಸೋಯಾಬಿನ್ ಗಳನ್ನು ಬೆಂಬಲ ಬೆಲೆ ಅಡಿ ಖರೀದಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಶೇಂಗಾ ಕ್ವಿಂಟಲ್ ಗೆ 2500 ರೂ. ನಿಂದ 7400 ರೂ.ವರೆಗೂ ದರ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಹಲವು ಕಡೆಗಳಲ್ಲಿ ರೈತರು ಕೊಯ್ಲು ಪೂರ್ಣಗೊಳಿಸಿ ಶೇಂಗಾ ಮಾರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಬೆಲೆ ಇಳಿಕೆ ಆತಂಕದಲ್ಲಿದ್ದ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಿರುವುದರಿಂದ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ ಶೇಂಗಾಕ್ಕೆ 6783 ರೂಪಾಯಿ ದರ ನಿಗದಿ ಪಡಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಶೇಂಗಾ ಖರೀದಿಗೆ ಕೇಂದ್ರದಿಂದ ಎರಡು ಮತ್ತು ರಾಜ್ಯ ಸರ್ಕಾರದಿಂದ ನಾಲ್ಕು ಏಜೆನ್ಸಿಗಳನ್ನು ಗುರುತಿಸಲಾಗಿದೆ. ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ದಾವಣಗೆರೆ, ಗದಗ, ರಾಯಚೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಅವಶ್ಯಕತೆ ಅನುಗುಣವಾಗಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular