ಕಲಬುರಗಿ : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ರಾಜ್ಯ ಸರ್ಕಾರ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿದೆ.
ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಶೀಘ್ರವೇ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು. ಹಾಗೂ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಹೇಳಿದರು. ನನಗೆ 1 ವರ್ಷ ಟೈಮ್ ಕೊಟ್ಟರೆ ಇಡೀ ಚಿತ್ತಾಪುರ ಕ್ಷೇತ್ರವನ್ನೇ ಅಭಿವೃದ್ದಿ ಪಡಿಸುತ್ತೇನೆ ಎಂದರು.