HomeIndiaಮೊಬೈಲ್ ಕದಿಯಲು ಯತ್ನಿಸಿದ ಯುವಕನನ್ನು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಮೊಬೈಲ್ ಕದಿಯಲು ಯತ್ನಿಸಿದ ಯುವಕನನ್ನು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಮೀರತ್: ಮೊಬೈಲ್ ಕದಿಯಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆ ಹಾಗೂ ಸ್ಥಳೀಯರು ಹಿಡಿದು ವಿವಸ್ತ್ರಗೊಳಿಸಿ, ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಜನಸಂದಣಿಯಿಂದ ಕೂಡಿದ್ದ ಮಾರ್ಕೆಟ್ ನಲ್ಲಿ ಯುವಕನೊಬ್ಬ ಮಹಿಳೆಯ ಮೊಬೈಲ್ ಕಿತ್ತುಕೊಂಡು ಎಸ್ಕೇಪ್ ಆಗುತ್ತಿದ್ದ. ಈ ವೇಳೆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನನ್ನು ಹಿಡಿದ್ದಾರೆ.

ಆಕ್ರೋಶಗೊಂಡ ಮಹಿಳೆ ಯುವಕನನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಥಳಿಸಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಆರೋಪಿ ಯುವಕ ತನ್ನನ್ನು ಬಿಟ್ಟುಬಿಡುವಂತೆ ಕೇಳಿಕೊಂಡರೂ ಮಹಿಳೆಯ ಕೋಪ ಕಡಿಮೆಯಾಗಿಲ್ಲ. ಯುವಕನ ತಲೆಕೂದಲು ಹಿಡಿದು ಎಳೆದು ಇನ್ನಷ್ಟು ಹಿಗ್ಗಾಮುಗ್ಗಾ ಹೊಡೆದಿದ್ದಾಳೆ. ಆರೋಪಿ ಯುವಕನನ್ನು ಅರ್ಮಾನ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಸಾರ್ವಜನಿಕರು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular