![](https://kannadadunia.com/wp-content/uploads/2024/10/khadri.jpg)
ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಅಜ್ಜಂಪೀರ್ ಖಾದ್ರಿ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಅವರನ್ನು ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸಿದ್ದು, ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಾಸ್ ಪಡೆಯುವಂತೆ ಸಿಎಂ ಸೂಚಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪರ ಪ್ರಚಾರ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಮನವಿ ಹಿನ್ನೆಲೆಯಲ್ಲಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯಲು ಒಪ್ಪಿದ್ದು, ಬಂಡಾಯ ಶಮನವಾಗಿದೆ.