ಬೆಂಗಳೂರು : ಮಳೆಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ 1.20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಆಗಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಅವರು ವಿಡಿಯೋ ಸಂವಾದ ನಡೆಸಿ, ಮಾಹಿತಿ ಪಡೆದು, ಪರಿಹಾರ ಕಾರ್ಯಗಳ ಶೀಘ್ರ ಅನುಷ್ಠಾನಕ್ಕೆ ಸೂಚನೆ ನೀಡಿದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್ಡಿಆರ್ಎಫ್ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ. 2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ತಿಳಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಸರ್ಕಾರದ ವತಿಯಿಂದ 1.20 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ ಎಂದು ಹೇಳಿದರು.