alex Certify BREAKING NEWS: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಶಿಕ್ಷೆ ಪ್ರಮಾಣ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ  ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬೇಲೇಕೆರಿ ಅಧಿರು ನಾಪತ್ತೆ ಪ್ರಕರಣದ ಎಲ್ಲಾ 6 ಕೇಸ್ ಗಳಲ್ಲಿಯೂ ಕಾರವಾರ-ಅಂಕೋಲಾ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಎರಡು ದಿನಗಳ ಹಿಂದೆ ತೀರ್ಪು ಪ್ರಕಟಿಸಿತ್ತು. ಶಿಕ್ಷೆ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

ಇದೀಗ ನ್ಯಾ.ಸಂತೋಷ್ ಗಜಾನನ ಭಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಮೊದಲ ಕೇಸ್ ನಲ್ಲಿ ಶಾಸಕ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ, 2ನೇ ಕೇಸ್ ನಲ್ಲಿಯೂ 3 ವರ್ಷ ಜೈಲು ಶಿಕ್ಷೆ ಹಾಗೂ 9 ಕೋಟಿ 60 ಲಕ್ಷ ಡಂಡ ವಿಧಿದ್ದಾರೆ.

ಮೂರನೇ ಕೇಸ್ 420, ವಂಚನೆ ಪ್ರಕರಣದಲ್ಲಿ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಲಾಗಿದೆ. ಅರಣ್ಯಾಧಿಕಾರಿ ಮಹೇಶ್ ಗೂ ಕೂಡ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ನಾಲ್ಕನೇ ಕೇಸ್ ನಲ್ಲಿಯೂ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಐದನೇ ಕೇಸ್ ನಲ್ಲಿಯೂ 7 ವರ್ಷ ಜೈಲು ಶಿಕ್ಷೆ  ಸೇರಿ ಒಟ್ಟು 6 ಪ್ರಕಣಗಳಲ್ಲಿಯೂ ಒಟ್ಟು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ.

ಜೊತೆಗೆ 44 ಕೊಟಿಗೂ ಅಧಿಕ ದಂಡವನ್ನು ವಿಧಿಸಲಾಗಿದ್ದು, ದಂಡದ ಮೊತ್ತವನ್ನು ಜಪ್ತಿ ಮಾಡುವಂತೆ ಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

ಸತೀಶ್ ಸೈಲ್ ಜೊತೆಗೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್, ಖಾರದಪುಡಿ ಮಹೇಶ್, ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಗೂ ಜೈಲು ಶಿಕ್ಷೆ ವಿಧಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...