ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ಅವಜಾಗೊಳಿಸಬೇಕು ಹಾಗೂ ಚುನಾವಣೆ ಘೋಷಿಸಬೇಕು ಎಂದರು.
ಇನ್ನು ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದು ಈಗಲಾದರೂ ಅರ್ಥವಾಗಿರಬೇಕು. ಕಾಂಗ್ರೆಸ್ ಪಕ್ಷವ್ ಭ್ರಷ್ಟರ ಪಕ್ಷ ಎಂಬುದಕ್ಕೆ ಈ ಪ್ರಕರಣ ಕೂಡ ಸಾಕ್ಷಿ ಎಂದು ಕಿಡಿಕಾರಿದ್ದಾರೆ.