HomeKarnatakaಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ...

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಲಪಾಡ್ ಬ್ರಿಗೇಡ್ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಪಾಟೀಲ್ ಮತ್ತು ಅವರ ಪತಿ ಶಿವರಾಜ್ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ್ ಅವರ ಪತ್ರ ರಿತೇಶ್ ಗುತ್ತೇದಾರ್ ಅವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿಸಿಬಿ ಪೊಲೀಸರು ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿದ ಮಂಜುಳಾ ಪಾಟೀಲ್, ಪತಿ ಶಿವರಾಜ್ ಪಾಟೀಲ್ ಅವರನ್ನು ಬಂಧಿಸಿದ್ದಾರೆ. ಮೂರು ದಿನದ ಹಿಂದೆ ರಿತೇಶ್ ಭೇಟಿಯಾಗಿದ್ದ ಆರೋಪಿಗಳು ನಿಮ್ಮ ತಂದೆ ನಿಂದನೆಯ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದ್ದರು. ಇದು ಹೊರಗೆ ಬರದಂತೆ ಇರಲು 20 ಲಕ್ಷ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದರು. ಸಿಸಿಬಿ ಪೊಲೀಸರಿಗೆ ರಿತೇಶ್ ಈ ಕುರಿತಾಗಿ ದೂರು ನೀಡಿದ್ದರು. ಇಂದು ಹಣ ಕೊಡುವುದಾಗಿ ಕರೆಸಿಕೊಂಡಿದ್ದಾಗ ಬಂಧಿಸಲಾಗಿದೆ. ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಎಂಟು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular