BIG NEWS: ರಾಜ್ಯದಲ್ಲಿ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರಾತ್ರಿ 8ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಮಾಡಲು ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read