HomeKarnatakaಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಜೈಲಿನೊಳಗೆ ನಿಷೇಧಿತ ವಸ್ತು ಎಸೆದಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತುಗಳನ್ನು ಎಸೆದಿದ್ದ ನಾಲ್ವರನ್ನು ಬಂಧಿಸಲಾಗಿದೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಬಂಧಿಸಿರುವ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದಿರಾ ನಗರ ನಿವಾಸಿ ಲೋಕೇಶ್(24), ಹೋಟೆಲ್ ಕಾರ್ಮಿಕ ಉದಯಕುಮಾರ್(29) ಜೆಸಿಬಿ ಆಪರೇಟರ್ ಮುಬಾರಕ್ ಅಬ್ಬಾಸ್ ಅಲಿ ಹಾಗೂ ಮೆಕಾನಿಕ್ ಸಾಜೀದ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆಂಡಿನ ರೂಪದಲ್ಲಿ ಸುತ್ತಿ ಮೊಬೈಲ್, ಗಾಂಜಾ, ತಂಬಾಕು ಉತ್ಪನ್ನ, ಡ್ರಗ್ಸ್ ಇದ್ದರೆ ವಸ್ತುಗಳನ್ನು ಜೈಲಿನೊಳಗೆ ಎಸೆದಿದ್ದರು. ಕೊಲೆ ಪ್ರಕರಣದಲ್ಲಿ ಜೈಲಿನೊಳಗಿರುವ ಅಪರಾಧಿಗಳಿಗೆ ಇವುಗಳನ್ನು ತಲುಪಿಸಲು ಯತ್ನಿಸುತ್ತಿರುವುದಾಗಿ ಆರೋಪಿಗಳು ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾರೆ. ಎರಡು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular