alex Certify ಪ್ರವರ್ಗ -1ಕ್ಕೆ ಹಳ್ಳಿಕಾರ ಸಮುದಾಯ ಸೇರ್ಪಡೆ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವರ್ಗ -1ಕ್ಕೆ ಹಳ್ಳಿಕಾರ ಸಮುದಾಯ ಸೇರ್ಪಡೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...