ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ.
ರುದ್ರಯ್ಯ ಬಂಧಿತ ಆರೋಪಿ. ಈತ ನಾಲ್ಕು ದಿನಗಳ ಹಿಂದೆ ಪಿಜಿಯಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಸಂತ್ರಸ್ತೆ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಸಮೀಪದ ಪಿಜಿಯಲ್ಲಿ ನೆಲೆಸಿದ್ದಾರೆ.
ಪಿಜಿಯಲ್ಲಿ ಕೆಲುವು ದಿನಗಳಿಂದ ರುದ್ರಯ್ಯ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಕ್ಟೋಬರ್ 24ರಂದು ರಾತ್ರಿ ಸ್ಟೇರ್ ಕೇಸ್ ನಲ್ಲಿಟ್ಟಿದ್ದ ಲೈಟರ್ ತೆಗೆದುಕೊಳ್ಳಲು ಹೋಗಿದ್ದ ವೇಳೆ ಹಿಂದಿನಿಂದ ಹೋಗಿ ಸಂತ್ರಸ್ತೆಯನ್ನು ತಬ್ಬಿಕೊಂಡು ರುದ್ರಯ್ಯ ಮುತ್ತಿಟ್ಟು ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.