HomeKarnatakaಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗಲೇ ಹೃದಯಾಘಾತ: ವೇದಿಕೆಯಲ್ಲೇ ಕಲಾವಿದ ಸಾವು

ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಗಲೇ ಹೃದಯಾಘಾತ: ವೇದಿಕೆಯಲ್ಲೇ ಕಲಾವಿದ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಲಾವಿದ ಕಿತ್ತೂರು ತಾಲೂಕಿನ ಬಸಾಪುರ ಗ್ರಾಮದ ಈರಪ್ಪ ಫಕೀರಪ್ಪ ಬಬಲಿ(48) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೂರು ದಿನಗಳ ಕಾಲ ನಡೆದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ನಿಮಿತ್ತ ಚೆನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿನ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಜನಾ ಸ್ಪರ್ಧೆ ಆಯೋಜಿಸಿತ್ತು.

ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿದ್ದ ಈರಪ್ಪ ಅವರು ಸ್ಪರ್ಧೆ ಮುಗಿಸಿ ವೇದಿಕೆಯಿಂದ ನಿರ್ಗಮಿಸುವಾಗ ತೀವ್ರ ಹೃದಯಘಾತದಿಂದ ಕುಸಿತುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular