alex Certify BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶನಿವಾರ ಇಡಿ ಅಧಿಕಾರಿಗಳು ಮುಡಾ ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ದಾಳಿ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...