HomeKarnatakaBREAKING NEWS: ಹಾಸನ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ: ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

BREAKING NEWS: ಹಾಸನ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ: ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಬೆಂಗಳೂರು: ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಅ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಹಾಸನ ನಗರಸಭೆ ಮೇಲ್ದರ್ಜೆಗೇರಿಸಲು ಹಲವು ಬಾರಿ ಚರ್ಚೆಯಾಗಿತ್ತು. ಇದೀಗ ರಾಜ್ಯ ಸಚಿವ ಸಂಪುಟ ಸಭೆ ಈ ಬಗ್ಗೆ ಅನುಮೋದನೆ ನೀಡಿದೆ. ಇನ್ಮುಂದೆ ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು.

ಇದೇ ವೇಳೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿವಿ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular