HomeKarnatakaBIG NEWS: ಮುಡಾ ಮಾಜಿ ಆಯುಕ್ತರ ನಿವಾಸದ ಮೇಲೆ ಇಡಿ ದಾಳಿ

BIG NEWS: ಮುಡಾ ಮಾಜಿ ಆಯುಕ್ತರ ನಿವಾಸದ ಮೇಲೆ ಇಡಿ ದಾಳಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಾ.ನಟೇಶ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಡಾದಲ್ಲಿ ನಡೆದಿರುವ ಅಕ್ರಮ ಆರೋಪ ಸಂಬಂಧ ಇಡಿ ಅಧಿಕಾರಿಗಳು ಬೆಳಿಗ್ಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಮಂಜುನಾಥ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವ ನಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿಯೇ ಇದ್ದರು ಎಂದು ತಿಳಿದುಬಂದಿದೆ. ಇದೇ ವೇಳೆ ಮುಡಾ ಮತ್ತೊಬ್ಬ ಮಾಜಿ ಆಯುಕ್ತ ದಿನೇಶ್ ನಿವಾಸದ ಮೇಲೂ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ ನಡೆಸಿರುವ ಬೆನ್ನಲ್ಲೇ ಮುಡಾ ಹಗರನದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮ್ಯಯ ಅವರಿಗೂ ಆತಂಕ ಎದುರಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular