HomeKarnatakaBIG NEWS: ಶಿಗ್ಗಾವಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಪಕ್ಷದ ಅಭ್ಯರ್ಥಿ, ನಾಯಕರು ನಿರಾಳ

BIG NEWS: ಶಿಗ್ಗಾವಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಪಕ್ಷದ ಅಭ್ಯರ್ಥಿ, ನಾಯಕರು ನಿರಾಳ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರ ತಿರಕಸ್ಕೃತಗೊಂಡಿದೆ.

ತಮ್ಮ ಪುತ್ರನಿಗೆ ಅವರು ಟಿಕೆಟ್ ಕೇಳಿದ್ದರು. ಆದರೆ, ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಮಂಜುನಾಥ್ ಕುನ್ನೂರು ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರದೊಂದಿಗೆ ಅಫಿಡವಿಟ್ ನಲ್ಲಿ ಅಗತ್ಯ ಮತ್ತು ಸಮರ್ಪಕ ಮಾಹಿತಿ ದಾಖಲೆ ಸಲ್ಲಿಸದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಟಿಕೆಟ್ ಸಿಗದೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಜ್ಜಂಪೀರ್ ಖಾದ್ರಿ ಅವರು ಪಕ್ಷದ ನಾಯಕರ ಮನವೊಲಿಕೆಯ ಬಳಿಕ ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular