HomeKarnatakaಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ

ಬೆಂಗಳೂರಲ್ಲಿ ಕಟ್ಟಡ ಕುಸಿತ ಪ್ರಕರಣ: 8 ಮಂದಿ ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಎಂಟು ಕುಟುಂಬ ಕಾರ್ಮಿಕರ ಕುಟುಂಬಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪರಿಹಾರದ ಚೆಕ್ ವಿತರಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ 2.04 ಲಕ್ಷ ರೂಪಾಯಿ ಮೊತ್ತದ ಚೆಕ್ ಗಳನ್ನು ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಚೆಕ್ ವಿತರಿಸಲಾಗಿದೆ.

ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಕಳಪೆ ಕಾಮಗಾರಿಯಿಂದಾಗಿ ಅವಘಡ ಸಂಭವಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular