HomeKarnatakaSBI ಬ್ಯಾಂಕ್ ಗೆ ಕನ್ನ: ಲಾಕರ್ ನಲ್ಲಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

SBI ಬ್ಯಾಂಕ್ ಗೆ ಕನ್ನ: ಲಾಕರ್ ನಲ್ಲಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ಎಸ್.ಬಿ.ಐ. ಶಾಖೆಗೆ ಕನ್ನ ಹಾಕಿದ ಕಳ್ಳರು ಲಾಕರ್ ನಲ್ಲಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮರಾದ ಡಿವಿಆರ್ ಅನ್ನೂ ಹೊತ್ತುಕೊಂಡು ಹೋಗಿದ್ದಾರೆ.

ನ್ಯಾಮತಿ ಪಟ್ಟಣದ ನೆಹರು ರಸ್ತೆಯ ಎಸ್.ಬಿ.ಐ. ಬ್ಯಾಂಕ್ ನಲ್ಲಿ ಘಟನೆ ನಡೆದಿದೆ. ಶನಿವಾರ, ಭಾನುವಾರ ಬ್ಯಾಂಕಿಗೆ ರಜೆ ಇದ್ದ ಕಾರಣ ಕಳವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಟ್ಟಡದ ಒಂದು ಬದಿಯ ಕಿಟಕಿ ಸರಳುಗಳನ್ನು ಗ್ಯಾಸ್ ಕಟರ್ ನಿಂದ ತುಂಡರಿಸಿ ಒಳ ನುಗ್ಗಿದ ಕಳ್ಳರು ಲಾಕರ್ ನಲ್ಲಿದ್ದ ನಗದು, ಚಿನ್ನಾಭರಣ ಕದ್ದು ಸಿಸಿಟಿವಿ ವೈಯರ್ ಕಿತ್ತು ಹಾಕಿ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

ಸೋಮವಾರ ಬೆಳಿಗ್ಗೆ ಸಿಬ್ಬಂದಿ ಬ್ಯಾಂಕಿನ ಕೆಲಸಕ್ಕೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ನ್ಯಾಮತಿ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನ ದಳ ತಂಡ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular