ಬೆಂಗಳೂರು: ಯುಜಿ ದಂತ ವೈದ್ಯಕೀಯ ಮತ್ತು ಆಯಷ್ ಕೋರ್ಸ್ ಗಳ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸೋಮವಾರ ಪ್ರಕಟಿಸಿದೆ.
ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅಕ್ಟೋಬರ್ 30ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಯುಜಿ ವೈದ್ಯಕೀಯ ಕೋರ್ಸ್ ನ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಪ್ರವೇಶ ಬಯಸುವವರಿಗೆ ಆಪ್ಟನ್ ದಾಖಲಿಸಲು ಅಕ್ಟೋಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.