
ಮೈಸೂರು: ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪಿತ್ರಾರ್ಜಿತ ಆಸ್ತಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿದೆ. ಮುಸ್ಲೀಂರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಹೇಗೆ ಬಂತು? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ವಕ್ಫ್ ಆಸ್ತಿ ಎನ್ನಲು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ ಅದು? ಪ್ರತ್ಯೇಕ ಆಸ್ತಿ ಮುಸ್ಲಿಂರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿ ಬಂದಿದ್ದು? ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನ ಹುಣಸೂರಿನ ಗಣೇಶ ದೇವಾಲಯದ 17 ಎಕರೆ ನಮ್ಮದು ಎಂದು ವಕ್ಫ್ ಬೋರ್ಡ್ ಪಟ್ಟುಹಿಡಿದಿದೆ. ಯಾರದೋ ಹೆಣ ತಂದು ಹೂತು ನಮ್ಮದು ಎನ್ನುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿಯೂ ಇದೇ ಕಥೆಯಾಗಿದೆ. ಕಂಡವರ ಜಮೀನುಗಳಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡುತ್ತಾ ಹೋದರೆ ಹೇಗೆ? ಎಂದು ಕಿಡಿಕಾರಿದ್ದಾರೆ.