ಮೈಸೂರು : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೆ ಇಲಾಖೆಯಲ್ಲಿ ಶೀಘ್ರವೇ 60 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಕನ್ನಡಿಗರು ಕನ್ನಡದಲ್ಲೇ ಪರೀಕ್ಷೆ ಬರೆಯಬಹುದಾಗಿದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂಬುದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಹೇಳಿದರು.
ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ. ಸದ್ಯವೇ ಇನ್ನೂ 60 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪರೀಕ್ಷೆಗಳು ಕನ್ನಡದಲ್ಲೂ ಇರಲಿವೆ ಎಂದರು. ಈ ಮೂಲಕ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.