alex Certify BIG NEWS : ಪಟಾಕಿ ಸಿಡಿಸಲು, ಮಾರಲು ‘BBMP’ ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪಟಾಕಿ ಸಿಡಿಸಲು, ಮಾರಲು ‘BBMP’ ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ

ಪಟಾಕಿಗಳು ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಾರಿಗೊಳಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಮತ್ತು ಅವುಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿರುತ್ತದೆ.ಮಾನ್ಯ ಸರ್ವೋಚ್ಛ ನ್ಯಾಯಾಲಯವು ಪಟಾಕಿಗಳಿಗೆ ಸಂಬಂಧಿಸಿದಂತೆ. ರಿಟ್ ಪಿಟಿಷನ್ (ಸಿ) ನಂ.728/2015 ಇದರಲ್ಲಿ ದಿನಾಂಕ 23/10/2018 ಮತ್ತು ದಿನಾಂಕ 31/10/2018 ಹಾಗೂ ತದನಂತರ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿರವರ ದಿನಾಂಕ:18-10-2024ರ ಪತ್ರನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಸದರಿ ಆದೇಶದಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಸಮಯ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ದಿನಾಂಕ:31/10/2024 ರಿಂದ 02/11/2024ರವೆಗೆ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ.

ಅಲ್ಲದೇ, ‘ಹಸಿರು ಪಟಾಕಿ’ ಕುರಿತು ಉಲ್ಲೇಖ (2) ರ ಸರ್ಕಾರದ ಆದೇಶ ಸಂಖ್ಯೆ:ಆರ್ಡಿ 465 ಟಿಎನ್ಆರ್ 2020. ದಿನಾಂಕ 12/11/2020 ರಲ್ಲಿ ವಿವರಣೆಯನ್ನು ನೀಡಲಾಗಿದ್ದು, ಸದರಿ ಪ್ರತಿಯು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಿರುತ್ತದೆ.ಮುಂದುವರೆದು, 2024 ನೇ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಈ ಮೂಲಕ ಸೂಚಿಸಿದೆ.


,

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...