HomeAutoಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.

ವೆಂಕಟೇಶ ಚವ್ಹಾಣ್(20) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಎರಡೂ ಬೈಕ್ ಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular