ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ 14 ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ನ.15 ಮತ್ತು 16 ರಂದು ಎರಡು ದಿನಗಳು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

ಶಿವಮೊಗ್ಗ ಜಿಲ್ಲೆಗೆ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ನ. 14 ಮಧ್ಯಾಹ್ನ 2.30ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ಎಂ. -9448964356 ಇವರನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read