ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದತ್ತಮಾಲಾ ಅಭಿಯಾನ ನಡೆಯಲಿದೆ.
ನವೆಂಬರ್ 4ರಂದು ದತ್ತ ಮಾಲಾ ಧಾರಣೆ, ನವೆಂಬರ್ 10 ರಂದು ಶೋಭಾಯಾತ್ರೆ ಕೈಗೊಳ್ಳಲಾಗಿದೆ ಎಂದು ಶ್ರೀರಾಮ ಸೇನೆಯ ವಕ್ತಾರ ಎಸ್. ಭಾಸ್ಕರನ್ ತಿಳಿಸಿದ್ದಾರೆ.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನವೆಂಬರ್ 10ರಂದು ನಡೆಯಲಿರುವ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ತೆಲಂಗಾಣದ ಹಿಂದೂ ನಾಯಕಿ ಮಾಧವಿ ಲತಾ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಸಿ.ಟಿ. ರವಿ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.