HomeBusinessGOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

GOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ಯಾನ್ಸರ್ ಗುಣಪಡಿಸಲು ನೀಡಲಾಗುವ ಮೂರು ಜೀವ ರಕ್ಷಕ ಔಷಧಿಗಳ ದರ ಇಳಿಕೆ ಮಾಡುವಂತೆ ಔಷಧ ತಯಾರಿಕಾ ಕಂಪನಿಗಳಿಗೆ ಮಂಗಳವಾರ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

2024 -25 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಟ್ರಾಸ್ಟುಜುಮಾಬ್, ಒಸಿಮೆರ್ಟಿನಿಬ್, ದುರ್ವಾಲುಮಾಬ್ ಔಷಧಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡ 10 ರಿಂದ ಶೂನ್ಯಕ್ಕೆ ಕಡಿತಗೊಳಿಸಲಾಗಿದೆ. ರೋಗಿಗಳಿಗೆ ಕೈಗೆಟುಕುವ ದರಕ್ಕೆ ಈ ಔಷಧಗಳು ಲಭ್ಯವಾಗುವಂತೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಗರಿಷ್ಠ ಮಾರಾಟ ದರವನ್ನು ಕಡಿತಗೊಳಿಸಿ ಪರಿಷ್ಕರಣೆ ಮಾಡಿರುವ ದರವನ್ನು ಔಷಧಿಗಳ ಮೇಲೆ ನಮೂದಿಸಬೇಕು ಎಂದು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರದಿಂದ ಸೂಚನೆ ನೀಡಲಾಗಿದೆ.

ಈಗಾಗಲೇ ಈ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸುಂಕ ಹಾಗೂ ಜಿ.ಎಸ್.ಟಿ. ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular